Advertisement

Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

02:38 PM Nov 01, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1ರಂದು ನಗರದ ನೆಹರು ಮೈದಾನದಲ್ಲಿ ಜರಗಲಿದೆ. ಜತೆಗೆ ಹಲ್ಮಡಿ ಶಾಸನದ ಪ್ರತಿಕೃತಿ ಅನಾವರಣವೂ ನಡೆಯಲಿದೆ.

Advertisement

ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೆರೇಡ್‌ ಪಥಸಂಚಲನ, ಜಿಲ್ಲಾ ಪ್ರಶಸ್ತಿ ವಿತರಣೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಹಲ್ಮಿಡಿ ಶಾಸನ ಅನಾವರಣ
ಕಾರ್ಯಕ್ರಮ ಪೂರ್ವದಲ್ಲಿ ಪುರಭವನ ಮುಂಭಾಗದ ರಾಜಾಜಿ ಪಾರ್ಕ್‌ ಆವರಣದಲ್ಲಿ ಬೆಳಗ್ಗೆ 8.30ಕ್ಕೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ದಿನೇಶ್‌ ಗುಂಡೂರಾವ್‌ ಅನಾವರಣಗೊಳಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next