Advertisement
ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೆರೇಡ್ ಪಥಸಂಚಲನ, ಜಿಲ್ಲಾ ಪ್ರಶಸ್ತಿ ವಿತರಣೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮ ಪೂರ್ವದಲ್ಲಿ ಪುರಭವನ ಮುಂಭಾಗದ ರಾಜಾಜಿ ಪಾರ್ಕ್ ಆವರಣದಲ್ಲಿ ಬೆಳಗ್ಗೆ 8.30ಕ್ಕೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ದಿನೇಶ್ ಗುಂಡೂರಾವ್ ಅನಾವರಣಗೊಳಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.