Advertisement

Mangaluru: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಸ್ತೆತಡೆ

10:32 AM Jun 01, 2024 | Team Udayavani |

ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಯುವಜನ ಸೇವೆ,‌ ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.‌ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶನಿವಾರ ನಗರದ ಪಿವಿಎಸ್ ವೃತ್ತದ ಬಳಿ ರಸ್ತೆ ತಡೆ ನಡೆಯಿತು.

Advertisement

ಮುಖ್ಯಮಂತ್ರಿಗಳು ಕೂಡಲೇ ಸಚಿವರ ರಾಜೀನಾಮೆ ಪಡೆದು, ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಇದೇ ವೇಳೆ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಸ್ತೆ ತಡೆಯಿಂದಾಗಿ ಪಿವಿಎಸ್ ವೃತ್ತದ ಬಳಿ ಕೆಲ‌ ಹೊತ್ತು ಸಂಚಾರ ದಟ್ಟನೆ ಉಂಟಾಯಿತು. ಸಂಚಾರ ವಿಭಾಗದ ಪೊಲೀಸರು‌ ಪರ್ಯಾಯ ರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next