Advertisement

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

01:20 AM May 02, 2024 | Team Udayavani |

ಮಂಗಳೂರು: ಕೋಟೆಕಾರ್‌ ಬೀರಿ ಬಳಿಯ ಮನೆಯೊಂದರಲ್ಲಿ ಎಂಡಿಎಂಎ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದು 9 ಲಕ್ಷ ರೂ. ಮೌಲ್ಯದ 407 ಗ್ರಾಂ ಎಂಡಿಎಂ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಉಳ್ಳಾಲ ಬಸ್ತಿಪಡು³ ದರ್ಗಾರೋಡ್‌ ಅಬ್ದುಲ್‌ ಖಾದರ್‌ ಅವರ ಮಗ ಮೊಹಮ್ಮದ್‌ ಇಶಾನ್‌(35) ಹಾಗೂ ಉಳ್ಳಾಲ ಟಿ.ಸಿ.ರೋಡ್‌ ಅಕ್ಕರೆಕೆರೆಯ ಅಬ್ಬಾಸ್‌ ಮುಸ್ಲಿಯಾರ್‌ ಪುತ್ರ ಜಾಫರ್‌ ಸಾಕ್‌ (35) ಬಂಧಿತರು.

ಇವರಿಬ್ಬರು ಸೇರಿಕೊಂಡು ಬೃಹತ್‌ ಪ್ರಮಾಣದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತರನ್ನು ದಸ್ತಗಿರಿ ಮಾಡಿದರು.

ಮಾದಕ ವಸ್ತುವನ್ನು ಬೆಂಗಳೂರಿನಿಂದ ಖರೀದಿಸಿ ತಂದು ಮಂಗಳೂರಿನಲ್ಲಿ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು.

ಅವರಿಂದ ಎಂಡಿಎಂಎ ಮಾತ್ರವಲ್ಲದೆ ಡಿಜಿಟಲ್‌ ತೂಕ ಮಾಪನ, ಮೊಬೈಲ್‌ ಫೋನ್‌ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶವಾದ ಸೊತ್ತುಗಳ ಒಟ್ಟು ಮೌಲ್ಯ 16,13,800 ರೂ.

Advertisement

ಜಾಫರ್‌ ಸಾದಿಕ್‌ನ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್‌ ಇಶಾನ್‌ನ ಮೇಲೆ ಈ ಹಿಂದೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣ ದಾಖಲಾಗಿರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next