Advertisement

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

01:22 AM Oct 23, 2024 | Team Udayavani |

ಮಂಗಳೂರು: ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೆ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್‌ ಕೆ. ಹೇಳಿದರು.

Advertisement

ಮಿಟಿಗೇಶನ್‌ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ ಕಡಲ ತೀರದ ನಿರ್ವಹಣ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಂಡಮಾರುತ, ಭೂಕುಸಿತ, ಸಿಡಿಲು, ನೆರೆ ಮುಂತಾದ ಪ್ರಾಕೃತಿಕ ವಿಕೋಪಗಳ ಅಪಾಯ ವನ್ನು ತಗ್ಗಿಸಲು ಈ ಅನುದಾನದಿಂದ ಕಾಮಗಾರಿ ನಡೆಸಬಹುದು ಎಂದು  ತಿಳಿಸಿದರು.

ರಕ್ಷಣಾತ್ಮಕ ಕ್ರಮಗಳನ್ನು ಕೈಗೊಂಡು ಸಂಭಾವ್ಯ ಪ್ರಾಕೃತಿಕ ಅಪಾಯಗಳನ್ನು ತಡೆಗಟ್ಟುವುದು ಹಾಗೂ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅ ಧಿಕಾರಿಗಳು ಸಂಭಾವ್ಯ ಅಪಾಯ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಸಮರ್ಪಕ ವಿವರಣೆಯೊಂದಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು. ಕಾಮಗಾರಿಗಳಿಂದ ಯಾವ ರೀತಿ ಸಾರ್ವಜನಿಕರಿಗೆ ಮತ್ತು ಜಿಲ್ಲಾಡಳಿತಕ್ಕೆ ಅನುಕೂಲವಾಗಲಿದೆ ಎಂಬುದರ ಬಗ್ಗೆ ವಿವರಣೆ ಹಾಗೂ ಅಂದಾಜು ಪಟ್ಟಿಯೊಂದಿಗೆ ಮಾಹಿತಿ ನೀಡಲು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್‌ ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಪದೇಪದೆ ನೆರೆ ಮತ್ತು ನೀರು ನಿಂತು ತೊಂದರೆಗಳಾಗುವ ಪ್ರದೇಶಗಳಲ್ಲಿ ವಿಪತ್ತು ತಗ್ಗಿಸುವಿಕೆ ಅನುದಾನವನ್ನು ಬಳಸಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ. ಬೈಕಂಪಾಡಿ ಕೈಗಾರಿಕೆ ಪ್ರದೇಶದಿಂದ ಎಪಿಎಂಸಿ ಮೂಲಕ ಹಾದುಹೋಗುವ ರಾಜ ಕಾಲುವೆ ಸಮರ್ಪಕವಾಗಿಲ್ಲದೆ ಹಲವು ವರ್ಷಗಳಿಂದ ಕೈಗಾರಿಕೆ ಪ್ರದೇಶದಲ್ಲಿ ನೆರೆ ಉಂಟಾಗುತ್ತಿದೆ. ಅದೇ ರೀತಿ ಮರವೂರು ಕಿಂಡಿ ಅಣೆಕಟ್ಟು, ಹಿನ್ನೀರು ಪ್ರದೇಶ ಅದ್ಯಪಾಡಿಯಲ್ಲಿ ನೆರೆ ಉಂಟಾಗುತ್ತಿದೆ. ಮಿಟಿಗೇಷನ್‌ ಅನುದಾನದಲ್ಲಿ ಇಲ್ಲಿನ ನೆರೆ ನಿಯಂತ್ರಣಕ್ಕೆ ಅಗತ್ಯ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲು ಅವರು ಸೂಚಿಸಿದರು.

ಕಡಲ ತೀರ ನಿರ್ವಹಣೆ
ಜಿಲ್ಲೆಯ 11 ಸ್ಥಳಗಳಲ್ಲಿ ಕಡಲ ಕೊರೆತ ಸಮಸ್ಯೆ ನಿವಾರಣೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಅಧೀನದ ರಾಷ್ಟ್ರೀಯ ಸಮರ್ಥನೀಯ ಕರಾವಳಿ ನಿರ್ವಹಣ ಕೇಂದ್ರವು ಅಧ್ಯಯನ ನಡೆಸಿ 11 ಸ್ಥಳಗಳಲ್ಲಿ ವಿವಿಧ ರಕ್ಷಣಾತ್ಮಕ ಕ್ರಮಗಳನ್ನು ಜಾರಿಗೊಳಿಸಲು ಸೂಚಿಸಿದೆ ಎಂದು ಸಭೆಯಲ್ಲಿ ಬಂದರು ಇಲಾಖೆ ಅ ಧಿಕಾರಿಗಳು ತಿಳಿಸಿದರು.

Advertisement

ಈಗಾಗಲೇ ಎಡಿಬಿ ಯೋಜನೆಯ ಟ್ರಂಚ್‌-3 ಅಡಿಯಲ್ಲಿ 355 ಕೋ.ರೂ. ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಪಾಲಿಕೆ ಆಯುಕ್ತ ಆನಂದ್‌ ಸಿ.ಎಲ್‌., ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್‌, ವಿವಿಧ ಇಲಾಖೆ ಅಧಿಕಾರಿ ಗಳು, ಜಿಲ್ಲಾ ವಿಪತ್ತು ನಿರ್ವಹಣೆ ಘಟಕ ಸಮನ್ವಯಾಧಿಕಾರಿ ವಿಜಯಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next