Advertisement
ಪ್ರತಿಭಟನೆಯನ್ನು ದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಅವರು, ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಹಿಂದಿರುವ ರೂವಾರಿಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ .ತಾರತಮ್ಯ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ದಲಿತ ಸಂಘಟನೆಗಳ ಮುಖಂಡರಾದ ಬಿ.ಆರ್. ಭಾಸ್ಕರ್ ಪ್ರಸಾದ್, ಸದಸ್ಯ ರಿಯಾಝ್ ಕಡಂಬು, ಜಿಲ್ಲಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಮಿಶ್ರಿಯಾ ಕಣ್ಣೂರು, ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮೊದಲಾದವರು ಪಾಲ್ಗೊಂಡಿದ್ದರು.