Advertisement

ಮಂಗಳೂರು: ಆ. 8ರವರೆಗೆ ನಿಷೇಧಾಜ್ಞೆ ವಿಸ್ತರಣೆ, ನಿರ್ಬಂಧ ಜಾರಿ: ಜಿಲ್ಲಾಧಿಕಾರಿ ಆದೇಶ

10:24 PM Aug 05, 2022 | Team Udayavani |

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಕಲಂ 144ರನ್ವಯ ಆ. 5ರಿಂದ ಆ. 8ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಿಸಿ ಹಾಗೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Advertisement

ಆ. 5ರಿಂದ ಆ. 8ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಆಸ್ಪತ್ರೆಗಳು, ಔಷಧ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳು/ಸಿನೆಮಾ ಹಾಲ್‌, ಪಬ್‌ಗಳನ್ನು ಜಿಲ್ಲೆಯಾದ್ಯಂತ ಮುಚ್ಚುವಂತೆಯೂ ಸಾರ್ವಜನಿಕರು ತುರ್ತು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯದಿಂದ ಹೊರಬರದಂತೆಯೂ ಸೂಚಿಸಲಾಗಿದೆ.

ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅವಶ್ಯವೆಂದು ಕಂಡುಬಂದಲ್ಲಿ ಮಾತ್ರ ಬಸ್‌, ಆಟೋರಿûಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ. ಜಿಲ್ಲೆಯಲ್ಲಿ ಎಲ್ಲ ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ ಜಾತ್ರೆಗಳನ್ನು ಮುಂದೂಡುವುದು.

ಜಿಲ್ಲೆಯಲ್ಲಿ ಎಲ್ಲ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next