ಉಳ್ಳಾಲ: ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಮೂವರು ಅನ್ಯಕೋಮಿನ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ಬು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್ , ಆಶಿಕ್ ಹಲ್ಲೆಗೊಳಗಾದವರು. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು.ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು.ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.
ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ತಂಡ ಐವರನ್ಬು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಗಾಯಗೊಂಡ ಯುವಕರ ಜತೆಗಿದ್ದ ಮೂವರು ವಿದ್ಯಾರ್ಥಿನಿಯರನ್ಬು ಠಾಣೆಗೆ ಕರೆಸಿ ಬಳಿಕ ಮನೆಗೆ ಕಳುಹಿಸಲಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತರು : ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ 10 ಕ್ಕೂ ಹೆಚ್ಚು ಕಾರ್ಯಕರ್ತರನ್ಬು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಅಮಾಯಕ ಕಾರ್ಯಕರ್ತರನ್ಬು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಮಿಷನರ್ ಅವರನ್ಬು ಒತ್ತಾಯಿಸಿದರು.