Advertisement
ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.
Related Articles
Advertisement
ಪಟ್ಲ ಫೌಂಡೇಶನ್ನ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡ ಮಾತನಾಡಿ, ಸದಾಶಿವ ಶೆಟ್ಟಿ 150 ಕೋಟಿ ರೂ.ಗಿಂತಲೂ ಅಧಿಕ ಮೊತ್ತವನ್ನು ಸಮಾಜಕ್ಕೆ ನೀಡಿ ಬಡವರ ಕಣ್ಣೀರು ಒರೆಸಿದ್ದಾರೆ ಎಂದರು.
ಪಟ್ಲ ಫೌಂಡೇಶನ್ನ ಸರ್ವ ಘಟಕಗಳ ವತಿಯಿಂದ ಸದಾಶಿವ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಾಸಕ ರಾಜೇಶ್ ನಾೖಕ್ ಉಳಿಪಾಡಿಗುತ್ತು, ಟ್ರಸ್ಟ್ ಗೌರವ ಸಲಹೆಗಾರ ಪಟ್ಲಗುತ್ತು ಮಹಾಬಲ ಶೆಟ್ಟಿ, ಪಟ್ಲಗುತ್ತು ಲಲಿತಾ ಶೆಟ್ಟಿ, ಪಟ್ಲಗುತ್ತು ನಿರ್ಮಿತಾ, ಉದ್ಯಮಿ ಗಳಾದ ಸಿ.ಎ. ದಿವಾಕರ ರಾವ್, ಕೆ.ಎಂ. ಶೆಟ್ಟಿ ಮಧ್ಯಗುತ್ತು, ಪಟ್ಲ ಫೌಂಡೇಶನ್ ಪದಾಧಿಕಾರಿಗಳಾದ ಸುದೇಶ್ ಕುಮಾರ್ ರೈ, ರಾಜೀವ ಪೂಜಾರಿ ಕೈಕಂಬ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಆರತಿ ಆಳ್ವ, ರವಿಚಂದ್ರ ಶೆಟ್ಟಿ ಅಶೋಕನಗರ ಮೊದಲಾದವರಿದ್ದರು. ಟ್ರಸ್ಟ್ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ನಿರೂಪಿಸಿದರು.
ವಿನೂತನ ಶೈಲಿಯಲ್ಲಿ ಸಮ್ಮಾನಸಮ್ಮಾನದ ಪೇಟ, ಶಾಲು, ಸ್ಮರಣಿಕೆ, ತೈಲಚಿತ್ರವನ್ನೊಳಗೊಂಡ ವಸ್ತುಗಳನ್ನು ಪಲ್ಲಕ್ಕಿಯಲ್ಲಿ ತರಲಾಯಿತು. ಜತೆಗೆ ಗೆಂದಾಳೆ ಸೀಯಾಳ, ಅಡಿಕೆ ಗೊನೆ, ತರಕಾರಿ, ಹಣ್ಣು ಹಂಪಲು, ಅಕ್ಕಿ ಹಾಗೂ ಭತ್ತದ ಮುಡಿ, ಹಿಂಗಾರ ಮೊದಲಾದ ಬುಟ್ಟಿಗಳನ್ನು 6 ಜತೆ ಪತಾಕೆ, ಬಣ್ಣದ ಕೊಡೆ, ಕೊಂಬು, ವಾಲಗದೊಂದಿಗೆ ವೇದಿಕೆಗೆ ತಂದು ಸದಾಶಿವ ಶೆಟ್ಟರನ್ನು ಸಮ್ಮಾನಿಸಲಾಯಿತು. ಸೌಮ್ಯಾ ಅವರ ಹಾಡಿನೊಂದಿಗೆ ಮಂಜುಶ್ರೀ ಚಂದ್ರಹಾಸ್ ಶೆಟ್ಟಿ ಆರತಿ ಬೆಳಗಿದರು. ಸತೀಶ್ ಶೆಟ್ಟಿ ಪಟ್ಲ ಅಭಿನಂದನಾ ಗೀತೆಯ ಮೂಲಕ ಗೌರವ ಸಲ್ಲಿಸಿದರು. ಇದೇ ವೇಳೆ ಸದಾಶಿವ ಶೆಟ್ಟಿಯವರಿಗೆ ಪುಷ್ಪವೃಷ್ಟಿ ಮಾಡಲಾಯಿತು. ಬೃಹತ್ ಗಾತ್ರದ ಹೂವಿನ ಹಾರ ಹಾಗೂ ಸೇಬಿನ ಹಾರ ಹಾಕಿ ಗೌರವಿಸಲಾಯಿತು.