Advertisement
ನ.28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನ.9, 10 ಹಾಗೂ 23, 24ರಂದು ವಿಶೇಷ ನೋಂದಣಿ ಅಭಿಯಾನವು ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿ.24ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
Related Articles
-ನಮೂನೆ 6: 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 7: ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು.
-ನಮೂನೆ 8: ವಿಳಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿ ಹೆಸರು, ತಂದೆಯ ಹೆಸರು, ವಿಳಾಸ, ವಯಸ್ಸು, ಲಿಂಗ ಮುಂತಾದವುಗಳನ್ನು ತಿದ್ದುಪಡಿ ಮಾಡಲು, ಎಪಿಕ್ ಕಾರ್ಡ್ ಬದಲಾಯಿಸಲು ಇತ್ಯಾದಿ.
-ನಮೂನೆ 6: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು.
Advertisement
ಜ.1, ಎ.1, ಜು.1, ಅ.1ರಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.ವೋಟರ್ ಹೆಲ್ಪ್ಲೈನ್ ಆ್ಯಪ್ ಅಥವಾ https://voters.eci.gov.in ವೆಬ್ಸೈಟ್ ಮೂಲಕವೂ ಅರ್ಜಿ ಸಲ್ಲಿಸಬಹುದು. ವಯಸ್ಸು ಮತ್ತು ವಾಸಸ್ಥಳದ ದಾಖಲೆಗಳು ಮತ್ತು ಒಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿ ಕಾರಿಗಳಲ್ಲಿ ಅಥವಾ ಮತದಾರ ನೋಂದಣಾಧಿ ಕಾರಿ ಕಚೇರಿ (ಎ.ಸಿ. ಕಚೇರಿ, ತಹಶೀಲ್ದಾರ್ ಕಚೇರಿ) ಭೇಟಿ ನೀಡಿ ಹೆಸರು ನೋಂದಾಯಿಸುವ ಬಗ್ಗೆ ಅಥವಾ ಲೋಪದೋಷಗಳ ಬಗ್ಗೆ ಪರಿಶೀಲಿಸಬಹುದು. ವೆಬ್ ಪೋರ್ಟಲ್ www.ecokarnataka.kar.nic.in, https://voters.eci.gov.in ಮತ್ತು www.dk.nic.in
ನಲ್ಲಿ ವಿವರಗಳನ್ನು ಪರಿಶೀಲಿಸಬಹುದು. ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಮತದಾರರ ಪಟ್ಟಿ ಪರಿಷ್ಕರಣೆ ಪರಿಣಾಮಕಾರಿಯಾಗಲು ಎಲ್ಲ ರಾಜಕೀಯ ಪಕ್ಷಗಳು ಪ್ರತಿ ಬೂತ್ ಮಟ್ಟದಲ್ಲಿ ಬಿಎಲ್ಎಗಳನ್ನು ನೇಮಕಾತಿ ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.