Advertisement
ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ ಎರಡು ದಿನದ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.
Related Articles
Advertisement
ಕಾರ್ಯಕ್ರಮದ ಮುಖ್ಯ ಅತಿಥಿ ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಅಲ್ಲಮಪ್ರಭು ಗುಡ್ಡ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರಕ್ಕೆ ನಾಯಕತ್ವ ನೀಡಿದ್ದು ಕಾನೂನು ಕ್ಷೇತ್ರ. ಪ್ರಸ್ತುತ ರಾಷ್ಟ್ರಕ್ಕೆ ನಾಯಕತ್ವ ವಹಿಸುವವರನ್ನು ನಿರ್ಮಿಸುವ ಜವಾಬ್ದಾರಿ ಈ ಕ್ಷೇತ್ರಕ್ಕಿದೆ. ವಿಷಯದಲ್ಲಿ ಪ್ರಾವೀಣ್ಯತೆ ಮತ್ತು ಭಾಷಾ ಪ್ರಬುದ್ಧತೆ ಹೊಂದಿರುವ ಕಾನೂನು ವಿದ್ಯಾರ್ಥಿಗಳ ಅವಶ್ಯಕತೆ ಇದೆ ಎಂದು ನುಡಿದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ ವಿವೇಕಾನಂದ ಕಾನೂನು ವಿದ್ಯಾಲಯದ ನಿರ್ದೇಶಕ ಡಾ.ಬಿ.ಕೆ.ರವೀಂದ್ರ ಮಾತನಾಡಿ, ಕಾನೂನು ಅಧ್ಯಯನ ಬಹುಶಿಸ್ತು ಅಭ್ಯಾಸದ ಕ್ಷೇತ್ರ. ಸಮಾಜ ಕಟ್ಟುವಲ್ಲಿ ಕಾನೂನು ಅಧ್ಯಯನದ ಪಾತ್ರ ಮಹತ್ವವಾದದ್ದು. ಸಾಮಾಜಿಕ ದೃಷ್ಟಿಯುಳ್ಳ ವಕೀಲರನ್ನು ಸಮಾಜಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಕಾನೂನು ವಿದ್ಯಾಲಯಗಳಿಗಿವೆ. ಪ್ರಸ್ತುತದ ಹಲವು ಸವಾಲುಗಳನ್ನು ಎದುರಿಸಿ ಸಮಾಜಿಕ ಬದಲಾವಣೆಗೆ ನಾಂದಿ ಹಾಡುವ ಕಾರ್ಯ ಕಾನೂನು ಅಧ್ಯಯನದಿಂದ ಆಗಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ‘ಸಂವಿಧಾನ ಶಿಲ್ಪಿ, ಜ್ಞಾನಯೋಗಿ ಡಾ.ಬಿ.ಆರ್. ಅಂಬೇಡ್ಕರ್’ ಎಂಬ ಮರುಮುದ್ರಣಗೊಂಡ ಪುಸ್ತಕ ಬಿಡುಗಡೆ ಮತ್ತು ಎಬಿವಿಪಿ ಮೂರನೇ ಆವೃತ್ತಿಯ ವಿದ್ಯಾರ್ಥಿ ಸಂಸ್ಕೃತಿ ಚಳುವಳಿಯ ಪೋಸ್ಟರ್ ಅನಾವರಣಗೊಂಡಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯ ಸಮಿತಿಯ ಸದಸ್ಯೆ ಕು. ಪ್ರೇಮಾಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಮೀಕ್ಷಾ ಪ್ರಾರ್ಥಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯಾಧ್ಯಾಕ್ಷ ಡಾ.ರೋಹಿಣಾಕ್ಷ ಶಿರ್ಲಾಲು ಪ್ರಸ್ಥಾವಿಸಿ, ಕಾರ್ಯದರ್ಶಿ ಮಣಿಕಂಠ ಕಳಸ ಸ್ವಾಗತಿಸಿದರು. ವಿದ್ಯಾರ್ಥಿ ಪ್ರವೀಣ್ ಶಿವಮೊಗ್ಗ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.