Advertisement
ಪಾಲಿಕೆಯಿಂದ ಅನುಮತಿ ಪಡೆಯದೆ ಅನಧಿಕೃತವಾಗಿ, ಮುಂಜಾ ಗ್ರತಾ ಕ್ರಮ ಕೈಗೊಳ್ಳದೆ ಕೇಬಲ್ ದುರಸ್ತಿಗೆ ಗುಂಡಿ ತೆಗೆಯಲಾಗಿದೆ. ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಹಾಗಾಗಿ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಸಿಲ್ಲಾ ಅವರ ಕುತ್ತಿಗೆ ಮತ್ತು ಕಾಲಿಗೆ ಗಾಯವಾಗಿತ್ತು. ಅವರು ಅದೇ ದಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ತೆರಳಿದ್ದರು. ಆದರೆ ಮರುದಿನ ಅವರಿಗೆ ನೋವು ಹೆಚ್ಚಾಯಿತು. ವಾಂತಿ ಕೂಡ ಆರಂಭವಾಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ವೈದ್ಯರು ತಿಳಿಸಿದ್ದು ಅದರಂತೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅವರ ಕುಟುಂಬ ಮೂಲ ತಿಳಿಸಿದೆ.