Advertisement
ಸತೀಶ್ ಶೆಟ್ಟಿ ನೇತೃತ್ವದ 9 ಮಂದಿಯ ತಂಡ ಅಮೆರಿಕದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ.
Related Articles
Advertisement
ಪ್ರೊ| ಎಂ.ಎಲ್. ಸಾಮಗ ಮಾತನಾಡಿ, ಅಮೆರಿಕದ ಜನರು ನಮ್ಮ ಯಕ್ಷಗಾನ ತಂಡದ ಮೇಲೆ ತೋರಿಸಿದ ಪ್ರೀತಿ ಮರೆಯಲಾಗದ್ದು. ಪ್ರತಿಯೊಂದು ಪ್ರದರ್ಶನಕ್ಕೂ 500 ಜನರಿಗಿಂತ ಕಡಿಮೆ ಸೇರುತ್ತಿರಲಿಲ್ಲ. ನಮ್ಮ ತಂಡದಲ್ಲಿ ಕಲಾವಿದರು ಮಿತಿಯಲ್ಲಿ ಇದ್ದುದರಿಂದ ಅದಕ್ಕೆ ಸೂಕ್ತ ಎನಿಸುವ ಪ್ರಸಂಗ ಆಡಿ ತೋರಿಸಬೇಕಿತ್ತು. ಕೆಲವರು ತಾವು ವೇಷ ಹಾಕುತ್ತೇವೆ ಎಂದು ಮುಂದೆ ಬಂದರು ಹಾಗೂ ಕೆಲವರು ಭಾಗವತಿಕೆ ಕಲಿಯಲು ಆಸಕ್ತಿ ತೋರಿದರು. ಆನ್ ಲೈನ್ ಕ್ಲಾಸ್ ಬಗ್ಗೆಯೂ ವಿಚಾರಿಸಿದ್ದಾರೆ ಎಂದರು.
ಪಟ್ಲ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.
ಅಮೆರಿಕ ನಗರಗಳಲ್ಲಿ ಪಟ್ಲ ಫೌಂಡೇಶನ್ ಡೇ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಪ್ರದರ್ಶಿಸಿದ ಯಕ್ಷಗಾನ ಹಾಗೂ ಪಟ್ಲ ಫೌಂಡೇಷನ್ ಕಾರ್ಯ ಚಟುವಟಿಕೆಯನ್ನು ಮೆಚ್ಚಿ ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್‌ಫೀಲ್ಡ್ ನಗರದ ಮೇಯರ್‌ಸ್ಟೀವನ್ ವಿ. ಪೋಂಟೊ ಅವರು ಆ. 18 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ. ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ಮೇಯರ್ ಜುಲೈ 27 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.