Advertisement

Mangaluru ;ಭೂ ಮಾಲಕರ ಸಮಸ್ಯೆ ಪರಿಹಾರಕ್ಕೆ ಯತ್ನ : ಡಿ.ಸಿ.ಮುಲ್ಲೈ ಮುಗಿಲನ್‌

12:03 AM Sep 01, 2023 | Team Udayavani |

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು-ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಭರವಸೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭೂ ಮಾಲಕರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿಗಳು ಅಭಿವೃದ್ಧಿ ಸೂಚ್ಯಂಕದ ಮಾಪನವಾಗಿದ್ದು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಆರ್ಥಿಕ ಚಟುವಟಿಕೆಗಳ ಏಳಿಗೆಗೆ ಪೂರಕವಾಗಿರುತ್ತದೆ. ಈ ದಿಸೆಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಿದ ಭೂ ಮಾಲಕರ ಸಮಸ್ಯೆಗಳನ್ನು ಬಗೆ ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್‌ ಜಾವೇದ್‌ ಅಜ್ಮಿ, ವಿಶೇಷ ಭೂಸ್ವಾಧೀನಾಧಿಕಾರಿ ಮಹಮದ್‌ ಇಸಾಕ್‌, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸಂಬಂಧಿಸಿದ ಅಧಿಕಾರಿಗಳು, ಭೂ ಮಾಲಕರ ಹೋರಾಟ ಸಮಿತಿಯ ಅಧ್ಯಕ್ಷೆ ಮರಿಯಮ್ಮ ಥಾಮಸ್‌, ಸಂಚಾಲಕ ಪ್ರಕಾಶ್‌, ಪದಾಧಿಕಾರಿಗಳಾದ ರತ್ನಾಕರ ಶೆಟ್ಟಿ, ಜಯರಾಮ್‌ ಪೂಜಾರಿ, ವಿಶ್ವಜಿತ್‌ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next