Advertisement
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಪಿಲಿಕುಳಕ್ಕೆ ಸಾಕಷ್ಟು ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿ ನೀಡಿ ನಿಸರ್ಗಧಾಮದ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ. ತುಳುನಾಡ ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್‌ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್, ಡಿ. ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ ಸೋಜಾ, ಭೋಜೇಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಪ್ರಮುಖರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಪಿ.ಆರ್.ಶೆಟ್ಟಿ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.