Advertisement

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

01:10 AM Sep 13, 2024 | Team Udayavani |

ಮಂಗಳೂರು: ಪಿಲಿಕುಳದಲ್ಲಿ ಸರಕಾರಿ ನೇತೃತ್ವದ ಕಂಬಳದ ಜತೆಗೆ 7 ದಿನಗಳ ತುಳುನಾಡ ಉತ್ಸವ ಸಂಬಂಧ ಸ್ಪೀಕರ್‌ ಯು.ಟಿ.ಖಾದರ್‌ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.

Advertisement

ಸ್ಪೀಕರ್‌ ಯು.ಟಿ.ಖಾದರ್‌ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಪಿಲಿಕುಳಕ್ಕೆ ಸಾಕಷ್ಟು ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿ ನೀಡಿ ನಿಸರ್ಗಧಾಮದ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ. ತುಳುನಾಡ ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್‌ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಪಿಲಿಕುಳ ಹಾಗೂ ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸಮಾಲೋಚನೆ ಸಭೆ ಕರೆಯಲಾಗುವುದು ಎಂದರು.

ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಮಾತನಾಡಿ, ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್‌, ಡಿ. ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ರಾಜೇಶ್‌ ನಾಯ್ಕ, ಹರೀಶ್‌ ಪೂಂಜ, ಅಶೋಕ್‌ ಕುಮಾರ್‌ ರೈ, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿ’ ಸೋಜಾ, ಭೋಜೇಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಪ್ರಮುಖರಾದ ಬೆಳಪು ದೇವಿಪ್ರಸಾದ್‌ ಶೆಟ್ಟಿ, ಪಿ.ಆರ್‌.ಶೆಟ್ಟಿ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next