Advertisement

Mangaluru: ಅಪರಿಚಿತ ವ್ಯಕ್ತಿ ಸಾವು

08:30 PM Dec 25, 2024 | Team Udayavani |

ಮಂಗಳೂರು: ಮಂಗಳೂರಿನ ದಕ್ಕೆಯ ಕಟ್ಟಡವೊಂದರ ಎದುರು ರಸ್ತೆ ಬದಿಯಲ್ಲಿ ಡಿ.24ರಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಸುಮಾರು 45-46 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದು ತಪಾಸಣೆ ನಡೆಸಿದ ವೈದ್ಯರು ಆ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

Advertisement

ಅಪರಿಚಿತ ವ್ಯಕ್ತಿ ಸುಮಾರು 5.6 ಅಡಿ ಎತ್ತರವಿದ್ದು ಗ್ರೇ ಕಲರ್‌ ಟಿ ಶರ್ಟ್‌, ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ. 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, ಕುರುಚಲು ಗಡ್ಡ ಹೊಂದಿದ್ದಾರೆ. ಕುತ್ತಿಗೆಯಲ್ಲಿ ಕಪ್ಪು ಬಣ್ಣದ ಮಣಿಸರ ಇದೆ. ವಾರಸುದಾರರು, ಸಂಬಂಧಿಕರು ಇದ್ದರೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next