Advertisement

Mangaluru; ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ

05:54 PM Jun 13, 2024 | Team Udayavani |

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯನ್ವಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ ಸಭೆ, ಪುರಸಭೆ, ಪಾಲಿಕೆ ವ್ಯಾಪ್ತಿಯ ಹಾಗೂ ಇತರ ರಸ್ತೆಗಳಲ್ಲಿ ಮೊಬೈಲ್ ಸ್ಪೀಡ್ ರಾಡಾರ್ ಗನ್ ಉಪಯೋಗಿಸಿ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

Advertisement

ಜೂನ್ 13 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್, NHAI ಇಲಾಖೆಯ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್ ಅಝ್ಮಿ, PIU ಅನಿರುದ್ಧ ಕಾಮತ್, PWD ಇಲಾಖೆಯ JE ಲಾಯಿಡ್ ಡಿ’ಸಿಲ್ವಾ, ಮಂಗಳೂರು ನಗರ SMART CITY ವತಿಯಿಂದ AEE ಮಂಜು ಕೀರ್ತಿ ಎಸ್, MCC ಯಿಂದ EE ಜ್ಞಾನೇಶ್, AEE ಎಂ.ಎನ್ ಶಿವಲಿಂಗಪ್ಪ ಮತ್ತು AEE ಮಿಥುನ್  ಹಾಜರಿದ್ದರು.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ವೇಗದ ಮಿತಿಯನ್ನು ಮೀರುವ ವಾಹನ ಚಾಲಕರ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ಮೊಬೈಲ್ ಸ್ಪೀಡ್ ರಾಡಾರ್ ಗನ್ ಮುಖಾಂತರ ಪ್ರಕರಣಗಳನ್ನು ದಾಖಲಿಸುವ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ವಿವಿಧ ವಾಹನಗಳಿಗೆ ನಿಗದಿಪಡಿಸಿರುವ ವೇಗದ ಮಿತಿಯ ಸೂಚನಾ ಫಲಕಗಳನ್ನು ರಸ್ತೆಗಳ ಬದಿಯಲ್ಲಿ ಸಾಕಷ್ಟು ಕಡೆಗಳಲ್ಲಿ ಅಳವಡಿಸುವಂತೆ ಸೂಚಿಸಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅಧಿಸೂಚನೆ ಮುಖಾಂತರ ಹೊರಡಿಸಿರುವ ವಿವಿಧ ವರ್ಗಗಳ ವಾಹನಗಳು ಹಾಗೂ ಅವುಗಳ ವೇಗದ ಮಿತಿಯ ವಿವರವನ್ನು ಪ್ರತ್ಯೇಕವಾಗಿ ಲಗತ್ತಿಸಲಾಗಿದೆ.

ಈ ಅಧಿಸೂಚನೆಯಲ್ಲಿ ತಿಳಿಸಿರುವ ರಸ್ತೆಗಳನ್ನು ಉಪಯೋಗಿಸುವ ಎಲ್ಲಾ ವಾಹನ ಚಾಲಕರು ವೇಗದ ಮಿತಿಯ ಸೂಚನಾ ಫಲಕಗಳಲ್ಲಿ ಕಾಣಿಸಿದ ಮಿತಿಗಿಂತ ಕಡಿಮೆ ವೇಗದಲ್ಲಿ ವಾಹನವನ್ನು ಚಲಾಯಿಸಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳೂರು ನಗರ ಟ್ರಾಫಿಕ್ ಪೊಲೀಸರ “ಅಪಘಾತ ತಡೆ ಅಭಿಯಾನ” ಕ್ಕೆ ಸಹಕರಿಸುವಂತೆ ಕೋರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next