Advertisement

Mangaluru;ಮುಡಾ ಆಯುಕ್ತರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ವಿಹಿಂಪ, ದುರ್ಗಾವಾಹಿನಿ ಆಗ್ರಹ

11:46 PM Jan 08, 2024 | Team Udayavani |

ಮಂಗಳೂರು: ಕಚೇರಿಯ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್‌ ಅಲಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಬಂಧಿಸಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌, ದುರ್ಗಾವಾಹಿನಿ ಆಗ್ರಹಿಸಿದೆ.

Advertisement

ಮನ್ಸೂರ್‌ ಅಲಿ ಕಚೇರಿ ಮಹಿಳಾ ಸಿಬಂದಿ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಅವರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಮುಡಾ ಆಯುಕ್ತ ಮನ್ಸೂರ್‌ ಆಲಿ ತನಗೆ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಕೃತ್ಯವನ್ನು ದುರ್ಗಾವಾಹಿನಿ ಖಂಡಿಸುತ್ತದೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಮನ್ಸೂರ್‌ ಅಲಿಯನ್ನು ವಜಾಗೊಳಿಸಬೇಕು ಮತ್ತು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಡಾ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದುರ್ಗಾ ವಾಹಿನಿ ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ತಿಳಿಸಿದ್ದಾರೆ.

ಜಿಲ್ಲಾಡಳಿತ ತತ್‌ಕ್ಷಣ ಪ್ರಕರಣದ ಬಗ್ಗೆ ಗಮನಹರಿಸಿ, ಮುಡಾ ಆಯುಕ್ತ ಮನ್ಸೂರ್‌ ಅಲಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದಾರೆ.

ಹಗೆತನದಿಂದ ದೂರು; ಆಯುಕ್ತ
ಕಚೇರಿಯ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತಂತೆ ತನ್ನ° ಮೇಲೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮುಡಾ ಆಯುಕ್ತ ಮನ್ಸೂರ್‌ ಅಲಿ ಅವರು ಸೋಮವಾರ ಉರ್ವ ಠಾಣೆಗೆ ಹಾಜರಾಗಿ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆಯುಕ್ತರು, ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯ ಮತ್ತು ಹಗೆತನದಿಂದ ಮಹಿಳೆ ದೂರು ನೀಡಿದ್ದಾರೆ. ಡಿ. 27ರಂದು ಮುಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಗೆ ಸಂಬಂಧಿಸಿದ ಸುಮಾರು 100 ಪುಟಗಳಿಗೂ ಹೆಚ್ಚಿದ ನಡಾವಳಿಯನ್ನು ತಪ್ಪಾಗಿ ಬರೆದು ಕೊಟ್ಟಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಷ್ಟು ಉದ್ದದ ವರದಿ ಬರೆಯಲು ಸಾಧ್ಯವಿಲ್ಲ ಎಂದಿದ್ದರು. ಈ ಬಗ್ಗೆ ಸರಿಯಾಗಿ ಕೆಲಸ ಮಾಡುವುದಾದರೆ ಇರಿ, ಇಲ್ಲದಿದ್ದರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ. ಈ ಬಗ್ಗೆ ಗುತ್ತಿಗೆ ಏಜೆನ್ಸಿಗೂ ತಿಳಿಸಿದ್ದೆ. ಅದಕ್ಕೆ ಹಗೆತನದಲ್ಲಿ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next