Advertisement

Mangaluru ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

09:48 PM Jun 07, 2024 | Team Udayavani |

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

Advertisement

ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿಯೋರ್ವಳು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್‌ ಎಂಬಾತನ ಸ್ನೇಹವಾಗಿತ್ತು. ಮಾ. 23ರಂದು ಯುವತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದಾಗ ಅಲ್ಲಿಗೆ ಬಂದ ಆರೋಪಿ ವಿನೋದ್‌ರಾಜ್‌ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ.

ಅನಂತರವೂ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೇಲೆ ನೆರೆಮನೆಯವನು ಅತ್ಯಾಚಾರವೆಸಗಿರುವ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14 ವರ್ಷದ ಬಾಲಕಿಯ ಮನೆಯ ಪಕ್ಕದ ಮನೆಯಲ್ಲಿ ರೋಶನ್‌ ಎಂಬಾತ ವಾಸವಾಗಿದ್ದ. ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಎಪ್ರಿಲ್‌ನಲ್ಲಿ ಶಾಲೆಗೆ ರಜೆ ಇದ್ದಾಗ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ರೋಶನ್‌ ಮತ್ತೆ ಅತ್ಯಾಚಾರವೆಸಗಿದ್ದಾನೆ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next