Advertisement
ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದು, . ಅಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ 1 ಲಕ್ಷದ 50 ಸಾವಿರ ರೂ ಸುಲಿಗೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
Advertisement
ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.
ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.