Advertisement

ಮಂಗಳೂರು: ಯುವತಿಗೆ ಮಾದಕ ವಸ್ತು ನೀಡಿ ಅತ್ಯಾಚಾರ; ಆರೋಪಿ ಸೆರೆ

07:50 PM May 13, 2022 | Team Udayavani |

ಮಂಗಳೂರು: ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದು, . ಅಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ 1 ಲಕ್ಷದ 50 ಸಾವಿರ ರೂ ಸುಲಿಗೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಕಡೆಗಳಲ್ಲಿನ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ನೊಂದ ಯುವತಿಯು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ :  ಆ್ಯಸಿಡ್ ದಾಳಿಕೋರ ನಾಗೇಶ್‌ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!

ಬಂಧಿತ ಆರೋಪಿ ಉಳ್ಳಾಲದ ಪೆರ್ಮನ್ನೂರು ಗ್ರಾಮದ ಶಾನ್ ನವಾಸ್ (36) ಎನ್ನುವವನಾಗಿದ್ದಾನೆ.ಬಂಧಿತನನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

Advertisement

ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next