Advertisement
ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಕಚೇರಿಯಲ್ಲಿ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದೆ. ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳು ಸಿಗುವಂತೆ ಮಾಡಲು ಈ ಮೇಳವನ್ನು ಆಯೋಜಿಸಿದೆ. ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಮಾವು ತಳಿಗಳ ಪ್ರದರ್ಶನ ಮತ್ತು 10ಕ್ಕೂ ಹೆಚ್ಚು ವಿವಿಧ ಮಾವಿನ ತಳಿಗಳ ಮಾರಾಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
Related Articles
ಜಿಲೆಯಲ್ಲಿ ಮಾವು ಬೆಳೆಯನ್ನು 7,586.94 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ ರಸಪುರಿ, ತೋತಾಪುರಿ ಮಲ್ಲಿಕಾ, ಸೇಂದೂರು ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದೆ. ಹಲಸು ಬೆಳೆಯನ್ನು 69.52 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಮೇಳದಲ್ಲಿ ಹಾಪ್‌ಕಾಮ್ಸ್ ದರಕ್ಕಿಂತ ಕಡಿಮೆ ದರದಲ್ಲಿ ಗ್ರಾಹಕರು ಹಣ್ಣು ಕೊಳ್ಳಬಹುದಾಗಿದೆ ಎಂದು ಜಿಪಂ ಸಿಇಒ ಕೆ. ರೇವಣಪ್ಪ ಹೇಳಿದರು.
Advertisement
ಆರೋಗ್ಯ ಸಚಿವರಿಂದ ಮಾವು ಮೇಳ ಉದ್ಘಾಟನೆಮಾವು, ಹಲಸು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಸಚಿವ ಂಟಿಬಿ ನಾಗರಾಜು, ತೋಟಗಾರಿಕೆ ಸಚಿವ ಎನ್. ಮುನಿರತ್ನ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದು, ಶಾಸಕ ಎಲ್.ಎನ್. ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮುಖ್ಯ ಅತಿಥಿಗಳಾಗಿ ಸಂಸದ ಬಿ.ಎನ್.ಬಚ್ಚೇಗೌಡ, ಎ.ರವಿ, ಶಾಸಕ ಟಿ.ವೆಂಕಟರಮಣಯ್ಯ, ಡಾ.ಕೆ. ಶ್ರೀನಿವಾಸಮೂರ್ತಿ, ಶರತ್‌ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಜಿಪಂ ಆಡಳಿತಾಧಿಕಾರಿ ಕೆ.ಪಿ. ಮೋಹನ್‌ರಾಜ್, ತೋಟಗಾರಿಕೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್, ಕೆ.ವಿ.ನಾಗರಾಜು, ಪುರಸಭೆ ಅಧ್ಯಕ್ಷೆ ಗೋಪಮ್ಮ, ಉಪಾಧ್ಯಕ್ಷೆ ಗೀತಾ, ರವಿಕುಮಾರ್.ಆರ್., ಎಲ್ಲಾ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲೆಯ ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು ಹಾಗೂ ಜಿಲ್ಲೆಯ ಮಾವು ಮತ್ತು ಹಲಸು ಬೆಳೆಗಾರರು ಭಾಗವಹಿಸಲಿದ್ದಾರೆ.