ಹಾಸನ: ತೋಟಗಾರಿಕೆ ಇಲಾಖೆ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಮಾವು ಬೆಳೆಗಾರರ ಸಂಘದ ಸಹಭಾಗಿತ್ವದಲ್ಲಿ 5 ದಿನಗಳ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳ ನಗರದ ಹಾಸನಾಂಬ ಕಲಾಭವನದ ಆವರಣದಲ್ಲಿ ಗುರುವಾರದಿಂದ ಆರಂಭವಾಯಿತು.
ರಾಸಾಯನಿಕ ಮುಕ್ತ ಹಣ್ಣು ಲಭ್ಯ: ಯಾವುದೇ ರಾಸಾಯನಿಕವನ್ನು ಬಳಸದೇ ಮಾವಿನ ಕಾಯಿಗಳನ್ನು ಹುಲ್ಲಿನ ಸಹಾಯದಿಂದ ಮಾಡಿರುವ ಈ ಹಣ್ಣುಗಳು ತಿನ್ನಲು ಸಹಾ ಅಷ್ಟೇ ರುಚಿಕರವಾಗಿವೆ. ರಾಮನಗರ, ಗದಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹಾ ರೈತರು ಆಗಮಿಸಿ ತಾವು ಬೆಳೆದ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದರೆ, ವಿವಿಧ ರೀತಿಯ ಮಾವಿನ ಹಣ್ಣುಗಳು ಗ್ರಾಹಕರ ಕಣ್ಮನ ಸೆಳೆಯುತ್ತಿವೆ.
ಸಂಸದರಿಂದ ಚಾಲನೆ: ಮಾವು ಮತ್ತು ಹಲಸಿನ ಮಾರಾಟ ಮೇಳವನ್ನು ಲೋಕಸಭಾ ಸದಸ್ಯಪ್ರಜ್ವಲ್ ರೇವಣ್ಣ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಅಕ್ರಂಪಾಷ ಹಾಗೂ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಮಂಗಳ, ಹಿರಿಯ ಸಹಾಯಕ ನಿರ್ದೇಶಕ ರವಿಕುಮಾರ್ ಮತ್ತಿತರರು ಹಾಜರಿದ್ದು ಹಲಸು ಹಾಗೂ ಮಾವಿನ ಮೇಳದಲ್ಲಿ ಪಾಲ್ಗೊಂಡು ವಿವಿಧ ಮಾನ ತಳಿಗಳನ್ನು ವೀಕ್ಷೀಸಿದರು.
ರಾಸಾಯನಿಕ ಮುಕ್ತ ಮಾವಿನ ಹಣ್ಣು : ಅರಿವು ಮೂಡಿಸಲು ಸಂಸದ ಸಲಹೆ
Advertisement
12ರ ವರೆಗೆ ಮಾರಾಟ: ಮೇಳವು ಜೂ. 10ರವರೆಗೆ ನಡೆಯಲಿದೆ. 12 ಮಳಿಗೆಗಳಲ್ಲಿ ಮಾವು ಮತ್ತು ಹಲಸಿನ ಹಣ್ಣುಗಳ ಪ್ರದರ್ಶನವಿದ್ದು, ಬಾದಾಮಿ, ಬಂಗನಪಲ್ಲಿ, ಮಲ್ಲಿಕಾ, ಸೆಂದೂರ, ಮಲಗೋವಾ, ತೋತಾಪುರಿ, ನೀಲಂ, ಆಮ್ರಪಾಲಿ, ಕೇಸರ್, ದಶೇರಿ, ಕನ್ನೇಲಿ, ಗೋಲಾ, ಮಾಯುದ್ದೀನ್, ರಸಪೂರಿ, ಗೂಳು ಮಾವು, ರತ್ನಗಿರಿ ಬಾದಾಮಿ, ನಿಲುದ್ದೀನ್ ಕ್ರಾಸ್ ಸೇರಿದಂತೆ ಸುಮಾರು 54 ವಿವಿಧ ತಳಿಗಳ ಕಾರ್ಬೈಡ್ ಮುಕ್ತ ಮಾವಿನ ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟ ಮೇಳದ ವಿಶೇಷವಾಗಿದೆ.
Related Articles
ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳ ಮಾರಾಟದ ಬಗ್ಗೆ ರೈತರು, ವ್ಯಾಪಾರಸ್ಥರು ಮತ್ತು ಗ್ರಾಹಕರುಗಳಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದರು. ನಗರದ ಹಾಸನಾಂಬ ಕಲಾಭವನದಲ್ಲಿ ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಮಾವು ಬೆಳೆಗಾರರ ಸಂಘದ ಸಹಭಾಗಿತ್ವದಲ್ಲಿ ಏರ್ಪಡಿಸಿರುವ ಹಲಸು ಮತ್ತು ಮಾವು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು ರೈತರಿಂದ ನೇರ ಖರೀದಿ ಮಾಡಲು ಹಾಗೂ ಮಾವಿನ ಹಣ್ಣುಗಳ ಕುರಿತು ಜನರಿಗೆ ತಿಳುವಳಿಕೆ ಮೂಡಿಸುವಂತಹ ಕಾರ್ಯಕ್ರಮವಾಗಿದೆ. ಈ ಮೇಳದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಇಲ್ಲಿ ಸುಮಾರು 54 ಜಾತಿಯ ಮಾವಿನ ಹಣ್ಣುಗಳನ್ನು ಇಲ್ಲಿ ಪ್ರದರ್ಶಿಸಿರುವುದು ಒಂದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನಿಂದ ಐದು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ರೈತರು, ಶಾಲಾ ಮಕ್ಕಳನ್ನು ಹೆಚ್ಚಾಗಿ ಕರೆ ತಂದು ಮಾವಿನ ಹಣ್ಣಿನ ಹಾಗೂ ಈ ಮೇಳದ ಅರಿವನ್ನು ಮೂಡಿಸಬೇಕು. ಕೋಲಾರ, ರಾಮನಗರ, ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವತಃ ಬೆಳೆದ ಮಾವಿನ ಹಣ್ಣುಗಳನ್ನು ತಂದು ಈ ಮಾವಿನ ಮೇಳವನ್ನು ಯಶಸ್ವಿಗೊಳಿಸಿದ್ದಾರೆ. ರೈತರಿಗೆ ಇಂತಹ ತಿಳುವಳಿಕೆ ಕಾರ್ಯಕ್ರಮಗಳು ನಡೆಯಬೇಕು ಎಂದರು.
Advertisement