ಹೊಸದಿಲ್ಲಿ : ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಎಸ್‌ಡಿಪಿಐ ದೆಹಲಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರವನ್ನು ವಿರೋಧಿಸಿ ಭಾಷಣ ಮಾಡಿದ ಅಯ್ಯರ್, ‘ದಶರಥ ಅತೀ ದೊಡ್ಡ ಚಕ್ರವರ್ತಿಯಾಗಿದ್ದ. ಅವರ ಅರಮನೆಯಲ್ಲಿ 10 ಸಾವಿರ ಕೋಣೆಗಳಿದ್ದವು. ರಾಮ ಇಂತಲ್ಲಿಯೇ ಹುಟ್ಟಿದ ಎಂದು ಹೇಳುವುದು ಹೇಗೆ. ಮಂದಿರ ನಿರ್ಮಾಣ ಮಾಡಿ, ಆದರೆ ಅಲ್ಲಿಯೇ ನಿರ್ಮಾಣ ಮಾಡಬೇಕೆನ್ನುವುದು ಸರಿಯಲ್ಲ’ ಎಂದಿದ್ದಾರೆ.
ಇದೇ ವೇಳೆ ‘1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡುವುದನ್ನು ತಡೆಯಲು ನರಸಿಂಹ ರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಯಿತು .ರಾವ್ ಅವರು ಮಸೀದಿ ಉಳಿಸಿಕೊಳ್ಳಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಹೇಳಿದ್ದಾರೆ.
Related Articles
ಅಯ್ಯರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.