Advertisement

ಚುನಾವಣೆಗೆ ಮಣಿಕಾ ಬಾತ್ರಾ ರಾಯಭಾರಿ

12:30 AM Jan 17, 2019 | |

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗಾಗಿ ಹೊಸದಿಲ್ಲಿ ಸುತ್ತಮುತ್ತ ಜಾಗೃತಿ ಮೂಡಿಸುವ ಸಲುವಾಗಿ ಟೇಬಲ್‌ ಟೆನಿಸ್‌ ಆಟಗಾರ್ತಿ ಹಾಗೂ ಕಾಮನ್ವೆಲ್ತ್‌ ಗೇಮ್ಸ್‌ ಪದಕ ವಿಜೇತೆ ಮಣಿಕಾ ಬಾತ್ರಾ ಅವರನ್ನು ಚುನಾವಣಾ ಆಯೋಗ ರಾಯಭಾರಿಯನ್ನಾಗಿ ನೇಮಕ ಮಾಡಿದೆ.

Advertisement

ಜಾಗೃತಿ ಮೂಡಿಸುವ ಸಲುವಾಗಿ ಹೊಸದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮತದಾರರ ಜಾಗೃತಿ ವೇದಿಕೆ (ವಿಎಎಫ್) ಹಾಗೂ ಚರ್ಚೆ ಹಾಗೂ ಚುನಾವಣಾ ಪ್ರಕ್ರಿಯೆ ಕುರಿತಾದ ಜಾಗೃತಿಗಾಗಿ ಮಾಹಿತಿ ಕೇಂದ್ರಗಳನ್ನು ಆರಂಭಿಸಿದ್ದಾರೆ.

“ಇತ್ತೀಚೆಗೆ ಮತದಾನ ಯಂತ್ರಗಳ (ಇವಿಎಂ) ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಿದ್ದು, ನಗರದ 300 ಸ್ಥಳಗಳಲ್ಲಿ ಜಾಗೃತಿ ವೇದಿಕಗಳನ್ನು ಸ್ಥಾಪಿಸಲಾಗಿದೆ. ಜನರಲ್ಲಿ ಚುನಾವಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರಮುಖ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಟಿಟಿ ಆಟಗಾರ್ತಿ ಮಣಿಕಾ ಬಾತ್ರಾ ಈ ಕಾರ್ಯಕ್ರಮಕ್ಕೆ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ ರಣ್‌ಬೀರ್‌ ಸಿಂಗ್‌ ತಿಳಿಸಿದ್ದಾರೆ.

“ಮಣಿಕಾ ಬಾತ್ರಾ ಅವರೊಂದಿಗೆ ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌ ಹಾಗೂ ಕ್ರಿಕೆಟಿಗ ರಿಷಬ್‌ ಪಂತ್‌ ಅವರನ್ನು ಕೂಡಾ ಜಾಗೃತಿ ಕಾರ್ಯಕ್ಕೆ ಆಹ್ವಾನಿಸಲಾಗಿದೆ’ ಎಂದು ಸಿಇಒನ ಹಿರಿಯ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next