Advertisement

Manipal ಬೈಕ್‌ಗಳ ಢಿಕ್ಕಿ: ಇಬ್ಬರು ಸವಾರನಿಗೆ ಗಾಯ

11:12 PM Oct 11, 2023 | Team Udayavani |

ಮಣಿಪಾಲ: ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿ ವ್ಯಕ್ತಿಗಳಿಬ್ಬರು ಗಾಯಗೊಂಡ ಘಟನೆ ನಡೆದಿದೆ.

Advertisement

ಪರ್ಕಳ ಕಡೆಯಿಂದ ಅತೀ ವೇಗದಿಂದ ಬಂದ ಬೈಕ್‌ ಸವಾರ 80 ಬಡಗುಬೆಟ್ಟು ಕಡೆಯಿಂದ ಬಾಬು ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರಿಗೂ ಗಾಯ ಉಂಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಸಾವು
ಮಣಿಪಾಲ: ಎದೆನೋವಿನಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಕೊಂಡು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸರೋಜಾ (71) ಅವರಿಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next