Advertisement

Manipal: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ: ಸಾವು

08:36 PM Sep 17, 2024 | Team Udayavani |

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.

Advertisement

ಸೆ. 17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next