ಮಣಿಪಾಲ: ಕಾರೊಂದರ ಹಿಂಬದಿಯಿಂದ ಇನ್ನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಬಸ್ ತಂಗುದಾಣ ಕಟ್ಟಡಕ್ಕೆ ಅಪ್ಪಳಿಸಿ, ಕಾರು ಚಾಲಕ ಗಾಯಗೊಂಡ ಘಟನೆ ನಡೆದಿದೆ.
ಎಂಐಟಿ ಜಂಕ್ಷನ್ ಬಳಿ ಹಾದು ಹೋಗಿರುವ ಉಡುಪಿ-ಶೃಂಗೇರಿ ರಾಷ್ಟ್ರೀಯ ಹೆ¨ªಾರಿ ರಸ್ತೆಯಲ್ಲಿ ಇನ್ನೋವಾ ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ತೆರಳುತ್ತಿತ್ತು.
ತನ್ನ ಮುಂದಿನಿಂದ ಹರೀಶ್ ಕುಮಾರ್ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಬಲಭಾಗಕ್ಕೆ ಇನ್ನೋವಾ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯಲ್ಲಿ ಇದ್ದ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದಿದೆ. ಕಾರು ಚಾಲಕ ಗಾಯಗೊಂಡಿದ್ದಾನೆ.
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮಣಿಪಾಲ: ಶಿವಳ್ಳಿ ಗ್ರಾಮದ ನಿವಾಸಿ ಮಹೇಶ (60) ಅವರು ಮನೆಯ ಮಾಡಿನ ಕಬ್ಬಿಣದ ರಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.