Advertisement

ಮಣಿಪಾಲ: ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ: ಕೆಎಂಸಿ ಆಸ್ಪತ್ರೆಗೆ ದಾಖಲು

09:58 AM Mar 14, 2020 | Mithun PG |

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ ಹರಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ವಿದ್ಯಾರ್ಥಿಗಳು ಇತ್ತೀಚೆಗೆ ಅಮೆರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಇಂದು ಸಂಜೆಯೊಳಗೆ ವರದಿ ಬರುವ ಸಾಧ್ಯತೆ ಇದೆ. ಇಬ್ಬರಿಗೂ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next