Advertisement

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

08:39 PM Jan 06, 2025 | Team Udayavani |

ಮಣಿಪಾಲ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗ ದಿತ ಅವಧಿ ಯಲ್ಲಿ ಪೂರ್ಣಗೊಳಿಸದೆ ನಿರ್ಲಕ್ಷ್ಯತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿ ಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ರಾ.ಹೆ. 169ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಈ ಸೂಚನೆ ನೀಡಿದರು.

Advertisement

ಉಡುಪಿಯಿಂದ ಮಣಿಪಾಲದ ಕಡೆಗೆ ಹೋಗುವ ರಸ್ತೆ ಅಗಲಗೊಳಿಸುವ ಕಾಮಗಾರಿ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯು ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚಿಸಿದ ಹಿನ್ನೆಲೆಯಲ್ಲಿ 2018ರಲ್ಲಿ ಸೇತುವೆ ನಿರ್ಮಾಣ ಪ್ರಕ್ರಿಯೆ ಆರಂಭವಾಗಿತ್ತು. ಕಾಮಗಾರಿ ವಿಳಂಬದಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಮುಖ ಗುತ್ತಿಗೆದಾರ ಹಾಗೂ ಉಪ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯುವಂತೆ ಅಭಿಯಂತರಿಗೆ ನಿರ್ದೇಶಿಸಿದರು.

ಈ ಹಿಂದಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ, ರಾತ್ರಿ ಮತ್ತು ಹಗಲು ಪಾಳಿಯಲ್ಲಿ ಕೆಲಸ ಮಾಡಿ ಜ. 10ರೊಳಗೆ ಸೇತುವೆಯನ್ನು ಸಂಚಾರಮುಕ್ತಗೊಳಿಸಬೇಕು ಎಂದು ಗುತ್ತಿಗೆದಾರರು ಹಾಗೂ ರಾ.ಹೆ. ವಿಭಾಗದ ಅಭಿಯಂತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರು.

ಬಾಕಿಯಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಕ್ತ ಯೋಜನೆ ರೂಪಿಸಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಮಾತನಾಡಿ, ಕಾಮಗಾರಿ ವಿಳಂಬದಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದ್ದು, ಅನೇಕ ಅಪಘಾತಗಳೂ ಸಂಭವಿಸಿವೆ. ಇದೆಲ್ಲದ್ದಕ್ಕೂ ನಿರ್ಲಕ್ಷ್ಯವೇ ಕಾರಣವಾಗಿದೆ. ಅಪಘಾತದ ಪ್ರಕರಣಗಳಲ್ಲಿಯೂ ಗುತ್ತಿಗೆದಾರರು, ಅಭಿಯಂತರನ್ನು ಸೇರಿಸಿ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗುವುದು ಎಂದರು.
ಕೊಂಕಣ ರೈಲ್ವೇ ಸೀನಿಯರ್‌ ಎಂಜಿನಿಯರ್‌ ಗೋಪಾಲಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾ.ಹೆ. ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next