Advertisement

ಮಣಿಪಾಲ: ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ; ಬಾಲಕಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

05:15 PM Aug 24, 2022 | Team Udayavani |

ಉಡುಪಿ: ಬೀದಿನಾಯಿಗಳು ವಿದ್ಯಾರ್ಥಿನಿ ಮೇಲೆ ದಾಳಿ ನಡೆಸಿದ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ.

Advertisement

ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಶಾಲೆಯೊಂದರ ಒಂದನೇ ತರಗತಿ ವಿದ್ಯಾರ್ಥಿನಿ ಶಾಲಾ ಕಾಂಪೌಂಡ್‌ ಒಳಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

5ರಿಂದ 6 ಬೀದಿನಾಯಿಗಳು ಆಕೆಯ ಮೇಲೆ ಎರಗಿದೆ. ಘಟನೆಯಿಂದಾಗಿ ವಿದ್ಯಾರ್ಥಿನಿಯ ತಲೆ ಸೀಳಿದಂತಾಗಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ನಗರಸಭೆ ತತ್‌ಕ್ಷಣ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.

ಘಟನ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್‌. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಆರೋಗ್ಯವನ್ನು ವೈದ್ಯರಲ್ಲಿ ವಿಚಾರಿಸಿದ್ದಾರೆ. ಅಲ್ಲದೆ ಬೀದಿನಾಯಿಗಳಿಗೆ ಅಗತ್ಯ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement

ಬೀದಿ ನಾಯಿಗಳ ಹಾವಳಿ: ನಗರಸಭೆ ಸಂಪೂರ್ಣ ನಿರ್ಲಕ್ಷ್ಯ
ಉಡುಪಿ ಹಾಗೂ ಮಣಿಪಾಲ ಭಾಗದಲ್ಲಿ ಬೀದಿನಾಯಿಗಳಿಂದಾಗಿ ಹಲವಾರು ಮಂದಿ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ಈ ಬಗ್ಗೆ ಉದಯವಾಣಿ ಪತ್ರಿಕೆಯೂ ಹಲವಾರು ಬಾರಿ ವರದಿ ಪ್ರಕಟಿಸಿ ಎಚ್ಚರಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಈ ಬಗ್ಗೆ ನಗರಸಭೆ ಅಧ್ಯಕ್ಷರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅಸಡ್ಡೆ ಬಿಟ್ಟು ಕೆಲಸ ನಿರ್ವಹಿಸಬೇಕಿದೆ. ಇಲ್ಲದಿದ್ದರೆ ಮತ್ತಷ್ಟು ಮಂದಿ ಈ ರೀತಿ ಸಂಕಷ್ಟಕ್ಕೀಡಾಗುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next