Advertisement

Manipal; ಹಿಟ್‌ ಆ್ಯಂಡ್‌ ರನ್‌: ಮೂವರಿಗೆ ಗಾಯ

10:50 PM Apr 21, 2024 | Team Udayavani |

ಮಣಿಪಾಲ: ಸ್ಕೂಟರ್‌ ಹಾಗೂ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ನಡೆದಿದೆ.

Advertisement

ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್‌ನಲ್ಲಿ ಬಿಗ್‌ ಬಾಸ್‌ ಹೊಟೇಲ್‌ ಸಮೀಪ ಇರುವ ಯು ಟರ್ನ್ ತಲುಪುತ್ತಿದ್ದಂತೆ ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಅತೀ ವೇಗದಿಂದ ಆಗಮಿಸಿದ ಕಾರು ಢಿಕ್ಕಿ ಹೊಡೆದಿದೆ.

ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರ ತ್ವನೀರ್‌ ಕೌರ್‌ಗೂ ಢಿಕ್ಕಿ ಹೊಡೆದಿದ್ದಾನೆ. ಮೂರು ಮಂದಿ ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next