Advertisement

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

06:28 PM Nov 15, 2024 | Team Udayavani |

ಮಣಿಪಾಲ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರೈನಾಲಜಿ (ಅಂತಃಸ್ರಾವಶಾಸ್ತ್ರ) ವಿಭಾಗದ ಸಹಯೋಗದೊಂದಿಗೆ ಮಲ್ಪೆ ಬೀಚ್‌ನಲ್ಲಿ ಝುಂಬಾ ಸೆಷನ್‌ (ವ್ಯಾಯಾಮ ಚಟುವಟಿಕೆ) ನಡೆಸಲಾಯಿತು.

Advertisement

ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಮಾತನಾಡಿ, ಝುಂಬಾ ಚಟುವಟಿಕೆಯಂತಹ ವ್ಯಾಯಾಮವು ಮಧುಮೇಹ ತಡೆಗಟ್ಟುವಿಕೆ ಮಾಡಲು ಜನರಿಗೆ ಸಹಾಯ ಮಾಡಲಿದೆ. ದೈನಂದಿನ ಚಟುವಟಿಕೆಗೂ ಇದು ಅತ್ಯಗತ್ಯವಾಗಿದೆ.

ಆರೋಗ್ಯಕರ, ಮಧುಮೇಹ-ಮುಕ್ತ ಭವಿಷ್ಯಕ್ಕೆ ಇದೊಂದು ಮಹತ್ತರ ಹೆಜ್ಜೆಯಾಗಿದೆ ಎಂದರು. ಎಂಡೋಕ್ರೈನಾಲಜಿ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ| ಸಹನಾ ಶೆಟ್ಟಿ ಮಾತನಾಡಿ, ಭಾರತದಲ್ಲಿ ಮಧುಮೇಹದ ಪ್ರಮಾಣ ಶೇ.11ರಷ್ಟು ಹೆಚ್ಚಾಗುತ್ತಿದೆ.

ಮಧುಮೇಹವು ಹೃದ್ರೋಗಗಳು, ಮೂತ್ರಪಿಂಡ ವೈಫ‌ಲ್ಯ, ಪಾದದ ಹುಣ್ಣು ಮತ್ತು ವಯಸ್ಕರಲ್ಲಿ ದೃಷ್ಟಿ ದೋಷಕ್ಕೆ ಕಾರಣವಾಗಲಿದೆ. ಇದು ಮಾನಸಿಕ ಆರೋಗ್ಯ ಮತ್ತು ಜೀವನದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆ. ಆರೋಗ್ಯಕರ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆ ಜತೆಗೆ ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳುವ ಮೂಲಕ ಮಧುಮೇಹ ತಡೆಗಟ್ಟಬಹುದು.

ವಾಕಿಂಗ್‌, ಜಾಗಿಂಗ್‌, ಸೈಕ್ಲಿಂಗ್‌, ಈಜು, ಯೋಗ, ಝುಂಬಾ, ಏರೋಬಿಕ್‌ ಇತ್ಯಾದಿ ದೈಹಿಕ ಚಟುವಟಿಕೆಗಳು ದೈಹಿಕ ಆರೋಗ್ಯ ಸುಧಾರಿಸುವುದು ಮಾತ್ರವಲ್ಲದೆ ನಮ್ಮ ಭಾವನಾತ್ಮಕ ಯೋಗಕ್ಷೇಮ ಸುಧಾರಿಸುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next