Advertisement
ಈ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಈ ಯೋಜನೆಗೆ ಅನುಮತಿ ನೀಡಿದ್ದು, ಅಂದಾಜುಪಟ್ಟಿ ತಯಾರಿಸುವಂತೆ ಸಮಿತಿಯು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ಅದರಂತೆ ಕಾಮಗಾರಿ ಪರಿಶೀಲನೆ ನಡೆಸಿ ಅಂದಾಜು ಪಟ್ಟಿ ಸಿದ್ಧಗೊಳ್ಳಲಿದೆ.
ಇದಕ್ಕಾಗಿ 98 ಲ.ರೂ. ಅಂದಾಜು ಮೊತ್ತ ಮೀಸಲಿರಿಸಲಾಗಿದೆ. ವಾಕಿಂಗ್ ಟ್ರ್ಯಾಕ್ ಪಕ್ಕದಲ್ಲೇ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಕೆರೆಯ ಸುತ್ತ 59 ಲ.ರೂ. ವೆಚ್ಚದಲ್ಲಿ ಸುಮಾರು 4 ಕಿ.ಮೀ. ಉದ್ದದ ಸೈಕ್ಲಿಂಗ್ ಟ್ರ್ಯಾಕ್ ನಿರ್ಮಿಸಲಾಗುತ್ತಿದೆ.
Related Articles
ಮಣ್ಣಪಳ್ಳ ಕೆರೆ ಅಂತರ್ಜಲ ಮಟ್ಟವನ್ನು ವೃದ್ಧಿಸಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಸುಮಾರು 123 ಎಕರೆ ವ್ಯಾಪ್ತಿ ಹೊಂದಿದ್ದು, ಸುತ್ತಲಿನ ಪ್ರದೇಶದಲ್ಲಿ ಸುರಿಯುವ ಮಳೆ ನೀರು ನೈಸರ್ಗಿಕವಾಗಿ ಹರಿದು ಸುಮಾರು 44 ಎಕರೆ ಪ್ರದೇಶದಲ್ಲಿ ಸಂಗ್ರಹಗೊಂಡು ಬೃಹತ್‌ಕೆರೆಯಾಗಿ ನಿರ್ಮಾಣಗೊಂಡಿದೆ. ಮಳೆಗಾಲದಲ್ಲಿ ಅಪಾರ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆ 29.90 ಹೆಕ್ಟೇರ್ ವಿಸ್ತೀರ್ಣ ಹೊಂದಿದೆ. ಈ ಪ್ರದೇಶಕ್ಕೆ ಪ್ರತಿನಿತ್ಯ ನೂರಾರು ಮಂದಿ ವಿಶ್ರಾಂತಿ, ವಾಕಿಂಗ್ ಮಾಡಲು ಆಗಮಿಸುತ್ತಿದ್ದಾರೆ.
Advertisement
ಪ್ರಸ್ತಾವನೆ ಸಲ್ಲಿಕೆಮಣ್ಣಪಳ್ಳ ಕೆರೆಯ ಅಭಿವೃದ್ಧಿ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆರೆಯ ಹೂಳೆತ್ತುವಿಕೆ ಕಾಮಗಾರಿ ನಡೆಯಲಿದೆ.
-ವಿದ್ಯಾಕುಮಾರಿ, ಎಡಿಸಿ