Advertisement

ಮಣಿಪಾಲ : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಮೂವರು ವಶಕ್ಕೆ

06:11 PM Feb 23, 2023 | Team Udayavani |

ಮಣಿಪಾಲ : ಹೆರ್ಗ ಗ್ರಾಮದ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಲಾಡ್ಜ್ ಮೇಲೆ ದಾಳಿ ನಡೆಸಿ ಬಂಧಿತ ಆರೋಪಿಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಲಾಡ್ಜ್‌ನ ಮ್ಯಾನೇಜರ್ ಸಂಪತ್ ಕುಮಾರ್ ಮತ್ತು ರೂಮ್ ಬಾಯ್ ದಿನೇಶ್ ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ. ಎರಡು ಪ್ರತ್ಯೇಕ ಕೊಠಡಿಗಳಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಪುರುಷನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next