Advertisement

Manipal; ವಿದ್ಯಾರ್ಥಿ ಆತ್ಮಹತ್ಯೆ; ಪ್ರಕರಣ ದಾಖಲು

10:51 PM Feb 16, 2024 | Team Udayavani |

ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್‌ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್‌ ರೂಂನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಣಿಪಾಲದ ಕಾಲೇಜೊಂದರಲ್ಲಿ ನಡೆದಿದೆ.

Advertisement

ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್‌ (20) ಆತ್ಮಹತ್ಯೆ ಮಾಡಿಕೊಂಡವ. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್‌ ಮೊಬೈಲ್‌ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next