Advertisement
ಅಂತಾರಾಷ್ಟ್ರೀಯ ಗುಣ್ಣಮಟ್ಟದ ಮೂಲಸೌಕರ್ಯ, ಸಂಚಾರ ನಿಯಂತ್ರಣ, ಸುರಕ್ಷತೆ, ಪ್ರವಾಸೋದ್ಯಮ, ಸ್ಥಳೀಯ ಹೂಡಿಕೆ ಹೆಚ್ಚಳ ಮೊದಲಾದವು “ಸ್ಮಾರ್ಟ್ ಸಿಟಿ’ ಯೋಜನೆಯಡಿ ಇರುತ್ತವೆ. ಖಾಸಗಿ – ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಮಣಿಪಾಲ, ಉಡುಪಿ, ಮಲ್ಪೆಗಳನ್ನು ಸ್ಮಾರ್ಟ್ ಸಿಟಿಯಾಗಿಸಲು ಬೆಂಗಳೂರಿನ ಸಂಸ್ಥೆ ಯೊಂದು ನೀಲನಕಾಶೆ ತಯಾರಿಸಿದ್ದು, ಡಿಪಿಆರ್ ಸಿದ್ಧವಾಗುತ್ತಿದೆ. ಈಗಾಗಲೇ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಎಸ್ಪಿ ನಿಶಾ ಜೇಮ್ಸ್, ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದೆ.
ಸ್ಮಾರ್ಟ್ ಮಣಿಪಾಲ, ಉಡುಪಿ, ಮಲ್ಪೆಯ ಚಿತ್ರಣ ಸಂಪೂರ್ಣವಾಗಿ ಬದಲಾಗಲಿದೆ. ಮಲ್ಟಿ ಲೆವೆಲ್ ಪಾರ್ಕಿಂಗ್‌ನಿಂದ ಪ್ರಸ್ತುತ ಉಡುಪಿ, ಮಲ್ಪೆ, ಮಣಿಪಾಲದಲ್ಲಿ ಕಾಡುತ್ತಿರುವ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಸಿಗಲಿದೆ. ಪ್ರಮುಖ ತಾಣಗಳ ಟ್ರಾಫಿಕ್ ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗಲಿದೆ. ಮುಂದಿನ ದಿನಗಳಲ್ಲಿ ರಸ್ತೆಗೆ ಇಳಿಯಲಿರುವ ಇಲೆಕ್ಟ್ರಾನಿಕ್ ವಾಹನಗಳಿಗಾಗಿ ಚಾರ್ಜಿಂಗ್ ವ್ಯವಸ್ಥೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಆಯ್ದ ಕಡೆಗಳಲ್ಲಿ ಪ್ಯಾನಿಕ್ ಬಟನ್ ವ್ಯವಸ್ಥೆ ಇರಲಿದೆ.
Related Articles
– ರಘುಪತಿ ಭಟ್, ಶಾಸಕರು, ಉಡುಪಿ
Advertisement