Advertisement
ಬುಡಕಟ್ಟು ಜನಾಂಗದವರಲ್ಲದ ಮೀಟೈಸ್ ಸಮುದಾಯದ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಬುಧವಾರ ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ (ATSUM) ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಸಾವಿರಾರು ಜನರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ಭುಗಿಲೆದ್ದಿದೆ.
Related Articles
Advertisement
ಹಿಂಸಾತ್ಮಕ ಘರ್ಷಣೆಗೆ ಬಿಜೆಪಿಯ ದ್ವೇಷದ ರಾಜಕಾರಣವೇ ಕಾರಣ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಜನರು ಸಂಯಮದಿಂದ ವರ್ತಿಸಿ ರಾಜ್ಯದಲ್ಲಿ ಶಾಂತಿ ನೆಲೆಸಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.