ಹೊಸದಿಲ್ಲಿ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ನ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶನಿವಾರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಈ ಘಟನೆಯು ಸರ್ಕಾರ ರಾಷ್ಟ್ರವನ್ನು ರಕ್ಷಿಸಲು ಅಸಮರ್ಥವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುತ್ತದೆ ಎಂದು ಆರೋಪಿಸಿದ್ದಾರೆ.
ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮಣಿಪುರದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯು ಮೋದಿ ಸರ್ಕಾರಕ್ಕೆ ರಾಷ್ಟ್ರವನ್ನು ರಕ್ಷಿಸುವ ಸಾಮರ್ಥ್ಯವಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹುತಾತ್ಮರಿಗೆ ನನ್ನ ಸಂತಾಪ ಮತ್ತು ಅವರ ಕುಟುಂಬಗಳಿಗೆ ಸಂತಾಪಗಳು. ರಾಷ್ಟ್ರವು ನಿಮ್ಮ ತ್ಯಾಗವನ್ನು ಸ್ಮರಿಸುತ್ತದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಸ್ಸಾಂ ರೈಫಲ್ಸ್‌ನ ಖುಗಾ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಮತ್ತು ಅರೆಸೈನಿಕ ಪಡೆಯ ನಾಲ್ವರು ಸಿಬ್ಬಂದಿ ಶನಿವಾರ ಬೆಳಿಗ್ಗೆ ಮಣಿಪುರದಲ್ಲಿ ನಡೆದ ಹೊಂಚುದಾಳಿಯಲ್ಲಿ ಹುತಾತ್ಮರಾಗಿದ್ದರು.
ಇದನ್ನೂ ಓದಿ:ಬೀದಿ ದೀಪ ಎಲ್‌ಇಡಿಯಾದರೆ ಅರ್ಧ ಕೋಟಿಗೂ ಹೆಚ್ಚು ಉಳಿತಾಯ !
ಅಶೋಕ್ ಗೆಹ್ಲೋಟ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಕೂಡ ದಾಳಿಯನ್ನು ಖಂಡಿಸಿದ್ದಾರೆ. ಮತ್ತು ಇದರ ಹಿಂದೆ ಇರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
“ಮಣಿಪುರದ ಚುರಾಚಂದ್‌ಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ನಡೆದ ಹೇಡಿತನದ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ, ಇದರಲ್ಲಿ ಐವರು ವೀರ ಯೋಧರು ಮತ್ತು ಇಬ್ಬರು ಕುಟುಂಬ ಸದಸ್ಯರು ಪ್ರಾಣ ಕಳೆದುಕೊಂಡರು. ಅವರ ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು ” ಎಂದು ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.