Advertisement

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

09:53 AM Oct 18, 2024 | Team Udayavani |

ಇಂಫಾಲ್: ಕಳೆದ ಕೆಲ ತಿಂಗಳುಗಳ ಹಿಂದೆ ಮಣಿಪುರದಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಘರ್ಷಣೆ ಇಂದಿಗೂ ಮುಂದುವರೆಯುತ್ತಲೇ ಇದ್ದು ಆಡಳಿತ ಸರಕಾರದ ವಿರುದ್ಧ ಜನ ಆಕ್ರೋಶ ಹೊರಹಾಕುವಂತಾಗಿದೆ. ದಿನ ಬೆಳಗಾದರೆ ಘರ್ಷಣೆ, ಹೊಡೆದಾಟ ರಾಜ್ಯದ ಜನ ಈ ಸರಕಾರದ ವಿರುದ್ಧ ಬೇಸತ್ತಿದ್ದು ಎದೆಗ ಆಡಳಿತ ಪಕ್ಷದ ಶಾಸಕರೇ ತಮ್ಮ ನಾಯಕನ ವಿರುದ್ಧ ದಂಗೆ ಎದ್ದಿದ್ದಾರೆ.

Advertisement

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಮಣಿಪುರದ 19 ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಿದ್ದಾರೆ.

ಈ ಪತ್ರಕ್ಕೆ ಸಹಿ ಹಾಕಿದವರಲ್ಲಿ ಅಸೆಂಬ್ಲಿ ಸ್ಪೀಕರ್ ತೊಕ್ಚೊಮ್ ​​ಸತ್ಯವ್ರತ್ ಸಿಂಗ್, ಸಚಿವ ತೊಂಗಮ್ ವಿಶ್ವಜಿತ್ ಸಿಂಗ್ ಮತ್ತು ಯುಮ್ನಮ್ ಖೇಮ್‌ಚಂದ್ ಸಿಂಗ್ ಸೇರಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಮೊದಲ ಬಾರಿಗೆ ಮೈತೇಯಿ, ಕುಕಿ ಮತ್ತು ನಾಗಾ ಶಾಸಕರ ನಡುವೆ ನಡೆದ ಸಭೆಯ ಬಳಿಕ ಬಿಜೆಪಿ ಶಾಸಕರಿಂದ ಪ್ರಧಾನಿ ಅವರಿಗೆ ಪತ್ರ ಕಳುಹಿಸಲಾಗಿದ್ದು ಪತ್ರದಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಗಲಭೆಯಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ ಅಲ್ಲದೆ ರಾಜ್ಯದಲ್ಲಿ ನಡೆಯುತ್ತಿರುವ ಅಶಾಂತಿಯನ್ನು ಕೊನೆಗೊಳಿಸಲು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸುವುದೇ ಏಕೈಕ ಮಾರ್ಗ. ಕೇವಲ ಭದ್ರತಾ ಪಡೆಗಳ ನಿಯೋಜನೆಯಿಂದ ಮಣಿಪುರ ಸಮಸ್ಯೆ ಬಗೆಹರಿಯುವುದಿಲ್ಲ. ರಾಜ್ಯದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಇದರಿಂದ ಹಣದುಬ್ಬರ ಗಗನಕ್ಕೇರುತ್ತಿದ್ದು, ಅನೇಕರು ನಿರುದ್ಯೋಗಿಗಳಾಗಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಜೊತೆಗೆ ಭಾರತ ಸಾಕಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಹಾಗಾಗಿ ಪ್ರಧಾನಿ ಮೋದಿ ಅವರು ಕೂಡಲೇ ಪತ್ರಕ್ಕೆ ಸ್ಪಂಧಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ ಒಂದು ವೇಳೆ ನಮ್ಮ ಪತ್ರಕ್ಕೆ ಸ್ಪಂದನೆ ದೊರಕದೇ ಇದ್ದರೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆಯನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next