ಹೊಸದಿಲ್ಲಿ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈಶಾನ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ.
ಮಣಿಪುರದ ಪರಿಸ್ಥಿತಿಯ ಕುರಿತು ಗೃಹ ಸಚಿವರು ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ, ಪ್ರಸ್ತುತ ಪರಿಸ್ಥಿತಿ ಮತ್ತು ಅಲ್ಲಿ ಸಹಜ ಸ್ಥಿತಿಗೆ ತರಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರಿಗೆ ವಿವರಿಸಿದರು
ಶನಿವಾರ ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಹದಿನೆಂಟು ರಾಜಕೀಯ ಪಕ್ಷಗಳು, ಈಶಾನ್ಯದ ನಾಲ್ಕು ಸಂಸದರು ಮತ್ತು ಪ್ರದೇಶದ ಇಬ್ಬರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಇಂಫಾಲ್ ಪೂರ್ವದ ಇಥಾಮ್ ಗ್ರಾಮವನ್ನು ಸುತ್ತುವರೆದಿದ್ದ ಮಹಿಳೆಯರು ಮತ್ತು ಭದ್ರತಾ ಪಡೆಗಳ ನೇತೃತ್ವದ ಗುಂಪಿನ ನಡುವಿನ ಘರ್ಷಣೆಯ ನಂತರ, KYKL ಉಗ್ರಗಾಮಿ ಗುಂಪಿನ ಒಂದು ಡಜನ್ ಸದಸ್ಯರು ಅಡಗಿಕೊಂಡಿದ್ದ ಪ್ರದೇಶದಲ್ಲಿ ಸೈನ್ಯವು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡದಂತೆ ತಡೆದು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂದು ತೆರಳಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನದಿಂದ ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಮತ್ತು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು “ಪೂರ್ಣ ಸೂಕ್ಷ್ಮತೆಯಿಂದ ನಮಗೆ ಮಾರ್ಗದರ್ಶನ ನೀಡಿದ್ದಾರೆ. ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ ಮತ್ತು ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲ ಜೂನ್ 13 ರಿಂದ ಒಬ್ಬ ವ್ಯಕ್ತಿಯೂ ಸಾವನ್ನಪ್ಪಿಲ್ಲ ಎಂದು ಗೃಹ ಸಚಿವರು ಸರ್ವಪಕ್ಷಗಳ ಸಭೆಯಲ್ಲಿ ಹೇಳಿದ್ದರು.