Advertisement

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

06:57 PM Nov 18, 2024 | Team Udayavani |

ಹೊಸದಿಲ್ಲಿ: ಮಣಿಪುರ ಗಲಭೆ ಮತ್ತು ಭದ್ರತೆಯ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಸೋಮವಾರ (ನ.18) ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಮಣಿಪುರದ ವಿಚಾರವಾಗಿ ಸತತ ಎರಡನೇ ದಿನ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

Advertisement

ಚರ್ಚೆಯು ರಾಜ್ಯದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಸವಾಲುಗಳ ಸುತ್ತ ಕೇಂದ್ರೀಕೃತವಾಗಿತ್ತು ಎಂದು ವರದಿ ಹೇಳಿದೆ. ಮಣಿಪುರದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಪರಿಗಣಿಸಿ, ಗೃಹ ಸಚಿವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಮತ್ತು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದರು.

ಮಣಿಪುರ ಸ್ಥಿತಿಯನ್ನು ಅವಲೋಕಿಸಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) ಹೆಚ್ಚುವರಿ 50 ತುಕಡಿಗಳನ್ನು, 5000 ಹೆಚ್ಚವರಿ ಸಿಬ್ಬಂದಿಗಳನ್ನು ಆ ಪ್ರದೇಶದಲ್ಲಿ ನಿಯೋಜನೆ ಮಾಡಲು ಸರ್ಕಾರ ಸೂಚಿಸಿದೆ. ಒಂದು ದಿನದ ಹಿಂದೆಯಷ್ಟೇ ಕೇಂದ್ರವು ಸಿಎಪಿಎಫ್‌ ನ 20 ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲಾಗಿದೆ.

ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ನಿವಾಸದಲ್ಲಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು. ಮಹಾರಾಷ್ಟ್ರದ ವಿದರ್ಭದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ಸಜ್ಜಾಗಿದ್ದ ಶಾ ಅವರು ತಮ್ಮ ಭೇಟಿಯನ್ನು ಈ ಕಾರಣಕ್ಕೆ ಮುಂದೂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next