ಇಂಫಾಲ್: ಮಣಿಪುರದ ಮೊರೆ ಜಿಲ್ಲೆಯಲ್ಲಿ ಬುಧವಾರ ಜನಸಮೂಹವು ಕನಿಷ್ಠ 30 ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಿದೆ ಮತ್ತು ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆಸಿದೆ .ಈ ಮನೆಗಳು ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಮೊರೆಹ್ ಬಜಾರ್ ಪ್ರದೇಶದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಬೆಂಕಿ ಹಚ್ಚಿದ ನಂತರ ದುಷ್ಕರ್ಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಯಾವುದೇ ಸಾವುನೋವು ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಂದಿಗಳನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್‌ಗಳಿಗೆ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಗುಂಪೊಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.ಮಂಗಳವಾರ ಸಂಜೆ ದಿಮಾಪುರದಿಂದ ಬಸ್ ಗಳು ಬರುತ್ತಿದ್ದಾಗ ಸಪೋರ್ಮಿನಾದಲ್ಲಿ ಈ ಘಟನೆ ಸಂಭವಿಸಿತ್ತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳೀಯರು ಮಣಿಪುರ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ಬಸ್‌ಗಳನ್ನು ಸಪೋರ್ಮಿನಾದಲ್ಲಿ ನಿಲ್ಲಿಸಿ ಯಾವುದೇ ಸಮುದಾಯದ ಸದಸ್ಯರು ಅದರಲ್ಲಿದ್ದರೆ ಪರಿಶೀಲಿಸುವುದಾಗಿ ಒತ್ತಾಯಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆಲವರು ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.
“ಶೀಘ್ರದಲ್ಲೇ, ಪರಿಹಾರ ಶಿಬಿರಗಳಿಂದ ಕುಟುಂಬಗಳು ಈ ಮನೆಗಳಿಗೆ ತೆರಳಲು ಸಾಧ್ಯವಾಗುತ್ತದೆ. ಬೆಟ್ಟಗಳು ಮತ್ತು ಕಣಿವೆಗಳಲ್ಲಿ ಇತ್ತೀಚಿನ ಹಿಂಸಾಚಾರದಿಂದ ಹಾನಿಗೊಳಗಾದ ಜನರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, ಇಂಫಾಲ್‌ನ ಸಜಿವಾ ಮತ್ತು ತೌಬಲ್ ಜಿಲ್ಲೆಯ ಯತಿಬಿ ಲೌಕೋಲ್‌ನಲ್ಲಿ ತಾತ್ಕಾಲಿಕ ಮನೆಗಳ ನಿರ್ಮಾಣವು ಮುಕ್ತಾಯದ ಹಂತದಲ್ಲಿದೆ ಎಂದು ಸಿಂಗ್ ಹೇಳಿದ್ದಾರೆ.
ಮೂರು ತಿಂಗಳ ಹಿಂದೆ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದು 160 ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.