Advertisement
ಕಾಣೆಯಾಗಿದ್ದಾರೆ ಎನ್ನಲಾಗಿದ್ದ ಮೈತೇಯಿ ಸಮುದಾಯದ 6 ಮಂದಿ ಶವವಾಗಿ ಪತ್ತೆ ಯಾಗಿದ್ದು, ಮಣಿಪುರದಲ್ಲಿ ಮತ್ತೂಮ್ಮೆ ಶಾಂತಿ, ಸುವ್ಯವಸ್ಥೆ ಹದಗೆಟ್ಟಿದೆ. ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಕ್ಕಳು, ಮೂವರು ಮಹಿಳೆಯರು ಸೋಮವಾರ ನಾಪತ್ತೆಯಾಗಿದ್ದರು. ಇವರ ಶವಗಳು ನದಿಯಲ್ಲಿ ಪತ್ತೆಯಾಗಿದ್ದು, ಕುಕಿ ಬಂಡುಕೋರರು ಇವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕುಕಿ ಬಂಡುಕೋರರು ಮತ್ತು ಭದ್ರತ ಪಡೆಗಳ ನಡುವೆ ನಡೆದ ಸಂಘರ್ಷದಲ್ಲಿ 10 ಮಂದಿ ಕುಕಿ ಯುವಕರು ಸಾವಿಗೀಡಾಗಿದ್ದಾರೆ. ಮೃತದೇಹಗಳನ್ನು ಅಸ್ಸಾಂಗೆ ಸಾಗಿಸ ಲಾಗಿದ್ದು, ಅಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಯುವಕರ ಕುಟುಂಬಸ್ಥರು ಶನಿವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.