Advertisement

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

02:55 PM Apr 19, 2024 | Team Udayavani |

ಇಂಫಾಲ್: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ.

Advertisement

ಒಂದು ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ಸಂದರ್ಭ ಗುಂಡಿನ ದಾಳಿ ನಡೆದಿದೆ, ಘಟನೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ವರದಿಯಾಗಿಲ್ಲ ಎನ್ನಲಾಗಿದೆ.

ಮಣಿಪುರದಲ್ಲಿ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಅದರಂತೆ ಇಂದು ಮೊದಲ ಹಂತದ ಮತದಾನ ಆರಂಭಗೊಂಡಿದೆ. ಮಣಿಪುರದಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ಇದರ ಹೊರತಾಗಿಯೂ ದುಷ್ಕರ್ಮಿಗಳು ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್‌ಪೋಕ್ಪಿಯಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂ ಮೆಷಿನ್ ಒಡೆದು ಹಾಕಿದ್ದಾರೆ ಎನ್ನಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಇಲ್ಲಿ ಕೂಡ ಕೆಲ ಸೂಕ್ಷ್ಮ ಮತಗಟ್ಟೆಗಳು ಇದ್ದು ಹೆಚ್ಚಿನ ಭದ್ರತೆ ಒದಗಿಸಬೇಕಾಗಿದೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next