ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಶೂಟರ್ ಮನೀಶ್ ನರ್ವಾಲ್ ಚಿನ್ನಕ್ಕೆ ಗುರಿಯಿಟ್ಟರೆ, ಸಿಂಗರಾಜ್ ಅಧಾನ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ ನರ್ವಾಲ್ ಮತ್ತು ಸಿಂಗರಾಜ್ ಸಾಧನೆ ಮಾಡಿದ್ದಾರೆ.
ಮನೀಶ್ ನರ್ವಾಲ್ ಅವರ ಚಿನ್ನದ ಸಾಧನೆಯೊಂದಿಗೆ ಭಾರತ ಈ ಬಾರಿಯ ಪ್ಯಾರಾಲಂಪಿಕ್ಸ್ ನಲ್ಲಿ ಮೂರು ಚಿನ್ನ ಗೆದ್ದ ಸಾಧನೆ ಮಾಡಿದೆ.
ಇದನ್ನೂ ಓದಿ:ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತ ಹಾಕಿ ತಂಡಗಳ ಗೈರು?
ಮನೀಶ್ ನರ್ವಾಲ್ 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆ ಕೂಡ ಆಗಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಸಿಂಗರಾಜ್ ಅವರು 216.7 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಇದರೊಂದಿಗೆ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಭಾರತೀಯರು ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.