ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಇಬ್ಬರೂ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಬ್ಬರ ರಾಜೀನಾಮೆಯನ್ನೂ ಅಂಗೀಕರಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರೀವಾಲ್ ನೇತೃತ್ವದ ಆಪ್ ಸರ್ಕಾರಕ್ಕೆ ಭಾರೀ ಹೊಡೆತ ಬಿದ್ದಂತಾಗಿದೆ.
ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಸಚಿವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಆಪ್ ಹೇಳಿಕೊಂಡಿದೆ.
ಸಿಸೋಡಿಯಾ ಪ್ರಕರಣದಲ್ಲಿ ಮಧ್ಯ ಪ್ರವೇಶಕ್ಕೆ ʻಸುಪ್ರೀಂʼ ನಕಾರ
ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಇಂತಹಾ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ಎಳೆದು ತರಬೇಡಿ. ಏನಿದ್ದರೂ ಹೈಕೋರ್ಟ್‌ನಲ್ಲೇ ಇತ್ಯರ್ಥ ಮಾಡಿಕೊಳ್ಳಿ ಎಂದು ಸಿಸೋಡಿಯಾ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಖಾರವಾಗಿಯೇ ಹೇಳಿದೆ.
ಇದನ್ನೂ ಓದಿ:
ʻತಾಕತ್ತಿದ್ರೆ 175 ಸ್ಥಾನಗಳಿಗೆ ಸ್ಪರ್ಧಿಸಿʼ : ನಾಯ್ಡು-ಕಲ್ಯಾಣ್‌ಗೆ ಜಗನ್‌ಮೋಹನ್ ಸವಾಲ್