Advertisement

Court Permission: ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಬಂದ ಸಿಸೋಡಿಯಾ

12:55 PM Nov 11, 2023 | sudhir |

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ದೆಹಲಿಯ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.

Advertisement

ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿಯನ್ನು ಭೇಟಿ ಮಾಡಲು ಐದು ದಿನಗಳ ಅನುಮತಿ ಕೋರಿ ಸಿಸೋಡಿಯಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಐದು ದಿನದ ಬದಲು ಒಂದು ದಿನ ಮಾತ್ರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಿ ಆದೇಶ ನೀಡಿದೆ. ಅದರಂತೆ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಭೇಟಿಗೆ ಅವಕಾಶ ಕಲ್ಪಿಸಿದೆ ಅದರಂತೆ ಪೊಲೀಸ್ ಬೆಂಗಾವಲಿನ ಜೊತೆ ದೆಹಲಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಪತ್ನಿಯ ಅರೋಗ್ಯ ವಿಚಾರಿಸಿದ್ದಾರೆ.

ಸಿಸೋಡಿಯಾ ಅವರ ಪತ್ನಿ ಮಲ್ಟಿಪಲ್ ಸ್ಕ್ಲೆರೋಸಿಸ್ನ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಚಾರ ನ್ಯಾಯಾಲಯಕ್ಕೆ ಸಲ್ಲಿಸಿದ ದಾಖಲೆಯಲ್ಲೂ ಇದೆ.

ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಸಿಬಿಐ ಬಂಧಿಸಿತ್ತು. ಬಳಿಕ ಮಾರ್ಚ್ 9ರಂದು ಇಡಿ ಕೂಡ ವಶಕ್ಕೆ ಪಡೆದಿತ್ತು. ಈ ಪ್ರಕರಣಗಳಲ್ಲಿ ಸಿಸೋಡಿಯಾ ಮತ್ತು ಇತರ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಆಪ್ ನಾಯಕ ಸಿಸೋಡಿಯಾ ಅವರು ಫೆಬ್ರವರಿಯಲ್ಲಿ ಸಿಬಿಐನಿಂದ ಬಂಧಿಸುವ ಮೊದಲು ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

Advertisement

ಬಂಧನಕ್ಕೊಳಗಾದ ನಂತರ ಅವರು ಉಪಮುಖ್ಯಮಂತ್ರಿ ಮತ್ತು ವಿವಿಧ ಇಲಾಖೆಗಳ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಆದರೆ ಅವರ ಕುಟುಂಬವು ಮಥುರಾ ರಸ್ತೆಯಲ್ಲಿರುವ ಅವರ ಆಗಿನ ಅಧಿಕೃತ ನಿವಾಸದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: UCC; ಈ ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ ಏಕರೂಪ ನಾಗರಿಕ ಸಂಹಿತೆ

Advertisement

Udayavani is now on Telegram. Click here to join our channel and stay updated with the latest news.

Next