Advertisement

ಮಂಜನಾಡಿ: ಟೆಂಪೋ ಡಿಕ್ಕಿ‌ ಹೊಡೆದು ಬೈಕ್ ಸವಾರ ಸಾವು

07:42 PM Jul 28, 2020 | sudhir |

ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಬಳಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಟೆಂಪೋ‌ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಮೃತನನ್ನು ಮಂಜನಾಡಿ ತೌಡುಗೋಳಿ ಕ್ರಾಸ್ ನ ಮಹಮ್ಮದ್ ಮುಸ್ತಫಾ ಅವರ ಪುತ್ರ ಮಹಮ್ಮದ್ ರಮೀಝ್ (19) ಎಂದು ಗುರುತಿಸಲಾಗಿದೆ.

ರಮೀಝ್ ಅವರು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದು ಮಧ್ಯಾಹ್ನ ವೇಳೆಯಲ್ಲಿ ಊಟಕ್ಕೆಂದು ಮನೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬರುತಿದ್ದ ಪಿಕಪ್ ಟೆಂಪೋವೊಂದು ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next